2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ,ಮಾರ್ಗದರ್ಶನ ಕಾರ್ಯಕ್ರಮ
2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಮತ್ತು ಹೊಸ ಮಾದರಿಯ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡುವ ಕುರಿತು ಬನ್ನಿ ವಿದ್ಯಾರ್ಥಿಗಳೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ- ಎಂಬ ಧ್ಯೇಯವಾಖ್ಯದೊಂದಿಗೆ ಮಕ್ಕಳೊಂದಿಗೆ ಸಂವಾದ ನಡೆಸುವಂತ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಬನಶಂಕರಿಯ ಡಿ ಎಸ್ ಆರ್ ಟಿಸಿಯಲ್ಲಿ ದಿನಾಂಕ 09-07-2021ರಂದು ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮವನ್ನು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ನಡೆಸಿಕೊಡಲಿದ್ದಾರೆ. ರಾಜ್ಯದ ವಿವಿಧೆಡೆಯ 10ನೇ ತರಗತಿ ಪರೀಕ್ಷಾರ್ಥಿಗಳು ಆಯಾ ಜಿಲ್ಲೆಗಳ ಡಯಟ್ ಮತ್ತು ಡಿಡಿಪಿಐ ಕಚೇರಿಗಳಿಂದ ಮಾನ್ಯ ಸಚಿವರೊಂದಿಗೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.