SSLC ಪರೀಕ್ಷೆ : ವಿಡಿಯೋ ಕಾನ್ಫರೆನ್ಸ್ ನಲ್ಲಿ ಶಿಕ್ಷಣ ಸಚಿವ ಹೇಳಿದ್ದೇನು?

ಸೋಮವಾರ, 22 ಜೂನ್ 2020 (19:05 IST)
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ 25 ರಿಂದ ಜುಲೈ 3 ರವರೆಗೆ ಜರುಗಲಿದ್ದು, ಇದಕ್ಕಾಗಿ ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.

ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪದೋಷವಾಗದಂತೆ ಸುವ್ಯವಸ್ಥಿತವಾಗಿ ನಡೆಸಬೇಕೆಂದು ರಾಜ್ಯದ ಎಲ್ಲಾ ಜಿಲ್ಲೆಗಳ  ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ಸುರೇಶ ಕುಮಾರ ಸೂಚನೆ ಕೊಟ್ಟಿದ್ದಾರೆ.

ಶಿಕ್ಷಣ ಸಚಿವ ಸರೇಶ್ ಕುಮಾರ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದ ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಮಾತನಾಡಿ, ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 35 + 5 ಪರೀಕ್ಷಾ ಕೇಂದ್ರಗಳು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 35  ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದಿದ್ದಾರೆ.

ಗೋವಾ ರಾಜ್ಯದಲ್ಲಿ 54 ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳಿದ್ದು, ಕಂಟೈನ್ಮೆಂಟ್ ಏರಿಯಾದ 6 ಮಕ್ಕಳಿಗೆ ಅಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ