ಇಂದಿನಿಂದ ಎಸ್‍ಎಸ್‍ಎಲ್‍.ಸಿ ಪರೀಕ್ಷೆ ಆರಂಭ

ಗುರುವಾರ, 21 ಮಾರ್ಚ್ 2019 (09:49 IST)
ಬೆಂಗಳೂರು : ಇಂದಿನಿಂದ ಎಸ್‍.ಎಸ್‍.ಎಲ್‍.ಸಿ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ಇಂದು ಪ್ರಥಮ ಭಾಷೆ ವಿಷಯಗಳ ಪರೀಕ್ಷೆ ನಡೆಯಲಿದೆ.


ಇನ್ನು ಈ ಬಾರಿ ಒಟ್ಟು 8 ಲಕ್ಷದ 41 ಸಾವಿರದ 666 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 4 ಲಕ್ಷದ 47 ಸಾವಿರದ 864 ಬಾಲಕರು ಹಾಗೂ 3 ಲಕ್ಷದ 93 ಸಾವಿರದ 802 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.


ರಾಜ್ಯಾದ್ಯಂತ 2857 ಪರೀಕ್ಷೆ ಕೇಂದ್ರಗಳಿದ್ದು, 46 ಸೂಕ್ಷ್ಮ ಕೇಂದ್ರಗಳು ಮತ್ತು 7 ಅತಿ ಸೂಕ್ಷ್ಮ ಕೇಂದ್ರಗಳಿವೆ. ಇದಲ್ಲದೆ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ ಮಾಡಲಾಗಿದ್ದು, ಸ್ಕ್ವಾಡ್‍ಗಳನ್ನ ನೇಮಿಸಲಾಗಿದೆ. ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಿಗೂ ಸಿಸಿಟಿವಿ ಹಾಕಲಾಗಿದೆ. ಏಪ್ರಿಲ್ ಕೊನೆ ವಾರ ಫಲಿತಾಂಶ ಪ್ರಕಟಗೊಳ್ಳಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ