SSLC ಪರೀಕ್ಷೆ : ಮಹಾರಾಷ್ಟ್ರದಿಂದ ಬಂದವರು ಕುಳಿತುಕೊಳ್ಳೋದು ಎಲ್ಲಿ ಗೊತ್ತಾ?

ಶನಿವಾರ, 20 ಜೂನ್ 2020 (21:47 IST)
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಗಳ ವ್ಯವಸ್ಥೆ ಮಾಡಲಾಗಿದೆ.  

ಜೂನ್ 25 ರಿಂದ ಜುಲೈ 4ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕಂಟೇನ್‍ಮೆಂಟ್ ಝೋನ್ ಮತ್ತು ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ವಿದ್ಯಾರ್ಥಿಗಳು ಹಾಜರಾದಲ್ಲಿ, ಅವರಿಗೆ ಪ್ರತ್ಯೇಕವಾದ ಕೋಣೆಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೋಣೆ ಕಾಯ್ದಿರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಧರಿಸುವಿಕೆ, ಥರ್ಮಲ್ ಸ್ಕ್ರೀನ್ ಸ್ಕ್ಯಾನಿಂಗ್ ಸೇರದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇದಕ್ಕಾಗಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಂಡ ನಿಯೋಜಿಸಲಾಗುತ್ತದೆ. ಮುಂಜಾಗ್ರತವಾಗಿ ಎಲ್ಲಾ ಸಾರಿಗೆ ಬಸ್‍ಗಳನ್ನು ಸಹ ಸ್ಯಾನಿಟೈಸ್ ಮಾಡಲು ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ