ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುತ್ತೆ : ಓದ್ಕೋಳ್ಳಿ ಎಂದ ಶಿಕ್ಷಣ ಸಚಿವ
ಬುಧವಾರ, 22 ಏಪ್ರಿಲ್ 2020 (16:02 IST)
ಮೇ 3 ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಅಂತ ಶಿಕ್ಷಣ ಸಚಿವ ಹೇಳಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ದರ್ಶನ ಮಾಡಿ ವಸತಿ ಶಾಲೆಯಲ್ಲಿರುವ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.
ಶ್ರೀ ಮಠದಲ್ಲಿ 1320 ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇರುವುದನ್ನು ಖಚಿತಪಡಿಸಿಕೊಂಡು ಈ ವಿದ್ಯಾರ್ಥಿಗಳಲ್ಲಿರುವ ಸಂಶಯ ಮತ್ತು ಸಂದೇಹಗಳಿಗೆ ಪರಿಹಾರ ಸೂಚಿಸುವ ಸಲುವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರಲ್ಲಿ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಉತ್ಸಾಹದಿಂದ ಓದಿನಲ್ಲಿ ಪ್ರವೃತ್ತರಾಗುವಂತೆ ಮನವೊಲಿಸುವ ಸಲುವಾಗಿ ಮಠಕ್ಕೆ ಭೇಟಿ ನೀಡಿದ್ದೇನೆಂದು ಸಚಿವರು ತಿಳಿಸಿದರು.