ಎಸ್‌ಎಸ್‌ಎಲ್‌ಸಿ, ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ರದ್ದು
ರಾಜ್ಯದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್ ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲು ತಿರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆ ಎಂಬುದರ ಬದಲಾಗಿ ವಾರ್ಷಿಕ ಪರೀಕ್ಷೆ 1,2 ಮತ್ತು 3ನೇ ಹಂತದ ಪರೀಕ್ಷೆ ಎಂದು ಆಯೋಜಿಸಲು ನಿರ್ಧಾರ ಮಾಡಲಾಗಿದೆ.ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ ಎಂದು ಶಿಕ್ಷಣ ಸಚಿವ ಮದುಬಂಗಾರಪ್ಪ ಹೆಳಿದ್ದಾರೆ.