ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: 10 ವರ್ಷದಲ್ಲೇ ಗರಿಷ್ಠ ಫಲಿತಾಂಶ

ಗುರುವಾರ, 19 ಮೇ 2022 (14:23 IST)

2021-22ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಬಿಡುಗಡೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.

ಕಳೆದ 10 ವರ್ಷಗಳಲ್ಲಿಯೇ ಅಧಿಕ ಫಲಿತಾಂಶ ಈ ವರ್ಷ ಬಂದಿದೆ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

625ಕ್ಕೆ 625 ಅಂಕವನ್ನು 145 ವಿದ್ಯಾರ್ಥಿಗಳು ತೆಗೆದಿದ್ದಾರೆ. ಈ ಬಾರಿ ವಿಜಯಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಬಂದಿದೆ. 624 ಅಂಕಗಳನ್ನು 309 ವಿದ್ಯಾರ್ಥಿಗಳು 623 ಅಂಕಗಳನ್ನು 422 ವಿದ್ಯಾರ್ಥಿಗಳು, 622 ಅಂಕಗಳನ್ನು 615 ವಿದ್ಯಾರ್ಥಿಗಳು, 621 ಅಂಕಗಳನ್ನು 706 ವಿದ್ಯಾರ್ಥಿಗಳು, 620 ಅಂಕವನ್ನು 704 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ ಎಂದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಒತ್ತಾಸೆ ಮೇರೆಗೆ ಇದೇ ಮೊದಲ ಬಾರಿಗೆ SSLC ಫಲಿತಾಂಶದ ಒತ್ತಡ ನಿರ್ವಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ಆರಂಭಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ