ಬೆಂಗಳೂರು: ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024 ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ರಾಜ್ಯದಾದ್ಯಂತ ನಡೆಸಿತು. ಪರೀಕ್ಷಾ ಫಲಿತಾಂಶವನ್ನು ನಾಳೆ ಪ್ರಕಟಗೊಳ್ಳಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಲು, ವಿದ್ಯಾರ್ಥಿಗಳು KSEAB ನ ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು ಅಥವಾ ನಿರ್ದಿಷ್ಟ ಸಂಖ್ಯೆಗೆ ತಮ್ಮ ನೋಂದಣಿ ಸಂಖ್ಯೆಯನ್ನು ಕಳುಹಿಸುವ ಮೂಲಕ ಎಸ್ಎಂಎಸ್ ಸೇವೆಯನ್ನು ಬಳಸಬಹುದು. ಶಾಲೆಯ ಸೂಚನಾ ಫಲಕಗಳಲ್ಲಿಯೂ ಫಲಿತಾಂಶಗಳನ್ನು ಪ್ರದರ್ಶಿಸಲಾಗುತ್ತದೆ.