ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿದ ತೆಲಂಗಾಣ ಸರ್ಕಾರ
ಮಂಗಳವಾರ, 9 ಜೂನ್ 2020 (09:37 IST)
ನವದೆಹಲಿ : ಕೊರೊನಾ ಭೀತಿ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ.
ತೆಲಂಗಾಣ ಸರ್ಕಾರ ಸೋಮವಾರದಂದು ಸಿಎಂ ಚಂದ್ರಶೇಖರ್ ನೇತೃತ್ವದಲ್ಲಿ ಸಭೆ ನಡೆಸಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಹರಡುವ ಭೀತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಾಗಿದೆ. ಇಂಟರ್ನಲ್ ಅಂಕಗಳ ಆಧಾರದಲ್ಲಿ ಮಕ್ಕಳಿಗೆ ಗ್ರೇಡ್ ಗಳನ್ನು ನೀಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.