ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನಲೆಯಲ್ಲಿ ಇಬ್ಬರೂ ಶಾಸಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆಲವೇ ದಿನಗಳ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಉಚ್ಚಾಟಿಸಲಾಗಿತ್ತು. ಈಗ ಇವರ ಸರದಿ.
ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ. ಹೈಕಮಾಂಡ್ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದ್ದಾರೆ. ಕಳೆದ ಬಾರಿ ಬಿಜೆಪಿ ಅಧಿಕಾರದಲ್ಲಿದ್ದಾಗ ಇಬ್ಬರೂ ಸಚಿವರಾಗಿದ್ದರು.
2023 ರಲ್ಲಿ ಮತ್ತೆ ಬಿಜೆಪಿಯಿಂದಲೇ ಸ್ಪರ್ಧಿಸಿ ಶಾಸಕರಾಗಿದ್ದರು. ಆದರೆ ಇತ್ತೀಚೆಗೆ ಬಿಜೆಪಿ ಜೊತೆಗೆ ಗುರುತಿಸಿಕೊಳ್ಳದೇ ಕಾಂಗ್ರೆಸ್ ಸಭೆ, ಸಮಾರಂಭಗಳಲ್ಲೇ ಗುರುತಿಸಿಕೊಳ್ಳುತ್ತಿದ್ದರು. ಅಲ್ಲದೆ, ಪಕ್ಷದ ನಾಯಕರ ವಿರುದ್ಧ ವಿಪಕ್ಷದವರಂತೆ ವಾಗ್ದಾಳಿ ನಡೆಸುತ್ತಿದ್ದರು.