ರಾಜ್ಯದಲ್ಲಿ ಸದ್ಯಕ್ಕಿಲ್ಲ 1ರಿಂದ 5 ನೇ ತರಗತಿ ಆರಂಭ : ಬಿ.ಸಿ. ನಾಗೇಶ್
ಸೋಮವಾರ, 20 ಸೆಪ್ಟಂಬರ್ 2021 (08:22 IST)
ಬೆಂಗಳೂರು : ರಾಜ್ಯದಲ್ಲಿ 1ರಿಂದ 5ರ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೊರೊನಾ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ 1ರಿಂದ 5ರ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ತಾಂತ್ರಿಕ ತಜ್ಞರು, ಶಿಕ್ಷಣ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಅಧಿವೇಶನದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ನೆರೆ ರಾಜ್ಯ ಕೇರಳದಲ್ಲಿ ಕೋವಿಡ್, ನಿಫಾ ರೋಗ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ಅಧಿಕಗೊಳ್ಳುತ್ತಿದೆ. ಈ ಕಾರಣದಿಂದ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಸದ್ಯಕ್ಕೆ ಶಾಲೆ ತೆರೆಯುವುದು ಸಾಧ್ಯವಿಲ್ಲ ಎಂದರು.