ಈ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷಾ ಕೇಂದ್ರ ಶುರು

ಶುಕ್ರವಾರ, 17 ಏಪ್ರಿಲ್ 2020 (14:49 IST)
ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಈ ಜಿಲ್ಲೆಯಲ್ಲಿ ಕೋವಿಡ್ -19 ಪರೀಕ್ಷಾ ಕೇಂದ್ರ ಶುರುವಾಗಲಿದೆ.

ಬೀದರ್ ಜಿಲ್ಲೆಯಲ್ಲಿ ಕೊರೊನಾ ವೈರಾಣು ಪರೀಕ್ಷಾ ಕೇಂದ್ರ ಪ್ರಾರಂಭಿಸಬೇಕು ಎನ್ನುವುದಕ್ಕೆ ಸಿಂ ಬಿ.ಎಸ್.ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಎಸ್ ಎಂದಿದ್ದು, ಬೀದರನಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ.

ಹೀಗಂತ ಪಶು ಸಂಗೋಪನೆ, ವಕ್ಫ್ ಮತ್ತು ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಇದಕ್ಕೆ ಸಂಬoಧಿಸಿದoತೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಬ್ರಿಮ್ಸ್ ನಿರ್ದೇಶಕರಿಗೆ ಸೂಕ್ತ ತಯಾರಿ ಮಾಡಿಕೊಳ್ಳಲು ಸಚಿವರು ಸೂಚಿಸಿದ್ದು, ಶೀಘ್ರದಲ್ಲಿಯೇ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತದೆ ಎಂದಿದ್ದಾರೆ.

ಬೀದರ ಜಿಲ್ಲೆಯಲ್ಲಿ ಈಗಾಗಲೇ 13 ಕೊರೊನಾ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಜಿಲ್ಲೆಯನ್ನು ಹಾಟ್ ಸ್ಪಾಟ್ ಜಿಲ್ಲೆಯಾಗಿ ಗುರುತಿಸಲಾಗಿದೆ. ಇದುವರೆಗೆ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕಕ್ಕೆ ಬಂದವರ ಸಂಖ್ಯೆ ಕೂಡ ಸಾವಿರದ ಗಡಿಯನ್ನು ದಾಟಿದೆ, ಇದು ಬೀದರ ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ