ವಿಧಾನಸಭೆ ಕಲಾಪ ಒಂದು ದಿನ ವಿಸ್ತರಣೆ
ವಿಧಾನಸೌಧದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವ ಎಚ್ ಡಿ ರೇವಣ್ಣ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಬಜೆಟ್ ಒಂದು ದಿನದ ಮಟ್ಟಿಗೆ ವಿಸ್ತರಣೆ ಮಾಡಲು ಮನವಿ ಮಾಡಿದ್ದರು.
ಅದರಂತೆ ಒಂದು ದಿನ ವಿಸ್ತರಣೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. 3 ಗಂಟೆ ಬಳಿಕ ಸಿಎಂ ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರ ಕೊಡಲಿದ್ದಾರೆ. ಈ ಸಂದರ್ಭದಲ್ಲಿ ಸಾಕಷ್ಟು ಗದ್ದಲಗಳಾಗುವ ಸಾಧ್ಯತೆಯಿದೆ.