ಯಡಿಯೂರಪ್ಪ, ಈಶ್ವರಪ್ಪ ನಡುವಿನ ಭಿನ್ನಮತ ಶಮನಕ್ಕೆ ದೆಹಲಿಯಲ್ಲಿ ಸಂಧಾನ ಸಭೆ!

ಶುಕ್ರವಾರ, 27 ಜನವರಿ 2017 (11:49 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ವಿವಾದದಿಂದ ರಾಜ್ಯ ಬಿಜೆಪಿ ಪಾಳಯದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯ ಶಮನಕ್ಕೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಂಧಾನ ಸಭೆ ಕರೆದಿದ್ದಾರೆ.
ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಯತ್ನ ಮಾಡುತ್ತಾರಾ ಅನ್ನುವುದನ್ನು ಕಾದು ನೋಡಬೇಕಿದೆ.
ದಿಲ್ಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಇಂದು ಸಂಜೆ 7 ಗಂಟೆಗೆ ಸಂಧಾನ ಸಭೆ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಇಬ್ಬರೂ ಪಾಲ್ಗೊಳ್ಳಲಿದ್ದಾರೆ. 
 
ಅಮಿತ್ ಶಾ ಕರೆದಿರುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರದಂತೆ ಕೇಂದ್ರ ಸಚಿವ ಅನಂತ್‌ ಕುಮಾರ್, ರಾಜ್ಯ ಉಸ್ತುವಾರಿ ಮುರುಳೀಧರರಾವ್ ಸೇರಿದಂತೆ ಆರ್‌ಎಸ್ಎಸ್ ಮುಂಖಡರು ಪಾಲ್ಗೊಳ್ಳಲಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ಬ್ರಿಗೇಡ್‌ಗೆ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 
 
ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ಎಂದು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ