ಇಂದು ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೇಕಾರ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿ ಸಚಿವ ಸ್ಥಾನ ನೀಡುವಂತೆ ಸಿಎಂ ಬಳಿ ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ. ಹಾಗೇ ಇಂದು ಹೆಚ್.ವಿಶ್ವನಾಥ್ ಅವರು ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಹಾಗೇ ಸಚಿವ ಸ್ಥಾನ ಪಕ್ಕಾ ಆದ ಹಿನ್ನಲೆಯಲ್ಲಿ ಶಾಸಕ ನಾರಾಯಣಗೌಡ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿ ಧನ್ಯವಾದ ತಿಳಿಸಿದ್ದಾರೆ ಎನ್ನಲಾಗಿದೆ.