ನೀಟ್ ಪರೀಕ್ಷೆಯಲ್ಲಿ ಅಕ್ರಮ ಖಂಡಿಸಿ ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

Sampriya

ಶುಕ್ರವಾರ, 21 ಜೂನ್ 2024 (19:43 IST)
Photo Courtesy X
ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿ, ಯುವ ವಿದ್ಯಾರ್ಥಿಗಳ ಜೀವನದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ನಗರದ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿತು..

ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಅಕ್ರಮ ಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹಾಗೂ ಅಖಿಲ ಭಾರತ ರಾಷ್ಟ್ರೀಯಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ  ಮಾತನಾಡಿದ ಅವರು, ನೀಟ್ ಪರೀಕ್ಷೆಗಳಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದ್ದರು ಮೌನಕ್ಕೆ ಜಾರಿರುವ ಬಿಜೆಪಿ ನೇತೃತ್ವದ ಕೇಂದ್ರ ಮೋದಿ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ