ರಾಜ್ಯದ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ: ಉಗ್ರಪ್ಪ

ಮಂಗಳವಾರ, 26 ಏಪ್ರಿಲ್ 2016 (15:03 IST)
ರಾಜ್ಯದ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಘೋಷಿಸಬೇಕು ಎಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.
 
ಕೇಂದ್ರ ಸರಕಾರ ರಾಜ್ಯಕ್ಕೆ ಬರಗಾಲ ನಿರ್ವಹಣೆಗಾಗಿ ಹಣನ್ನು ಬಿಡುಗಡೆ ಮಾಡುವುದಲ್ಲದೇ ಬರಗಾಲ ಪರಿಸ್ಥಿತಿಯ ನಿರ್ವಹಣೆಗಾಗಿ ಕೇಂದ್ರ ತಂಡವನ್ನು ರವಾನಿಸಬೇಕು ಎಂದು ಆಗ್ರಹಿಸಿದ್ದಾರೆ.
 
ರಾಜ್ಯದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿರುವ ಅನಂತ್ ಕುಮಾರ್, ಸದಾನಂದಗೌಡ ಕೂಡಲೇ ರಾಜ್ಯದಲ್ಲಿ ಎದುರಾಗಿರುವ ಬರಗಾಲ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಯವರ ಮೇಲೆ ಒತ್ತಡ ಹೇರಬೇಕು ಎಂದರು.  
 
ಕೆ.ಎಸ್. ಈಶ್ವರಪ್ಪ ಮತ್ತು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಮ್ಮ ಸಣ್ಣತನವನ್ನು ಮರೆತು ಕೇವಲ ಬರಗಾಲದ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸರಕಾರದ ಹೇಳಿಕೆಯ ಮೇಲೆ ನಂಬಿಕೆಯಿಲ್ಲವಾದಲ್ಲಿ ರಾಜ್ಯದ ಬರಗಾಲ ಪೀಡಿತ ಪ್ರದೇಶಗಳ ಪ್ರವಾಸ ಮಾಡಲಿ ಎಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ