ಸುಪ್ರೀಂಕೋರ್ಟ್: ತಮಿಳುನಾಡಿಗೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಒಪ್ಪಿದ ಸರಕಾರ

ಮಂಗಳವಾರ, 4 ಅಕ್ಟೋಬರ್ 2016 (15:23 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಲು ಕಾವೇರಿ ನದಿಯಿಂದ ತಮಿಳನಾಡಿಗೆ 6 ದಿನಗಳ ಕಾಲ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಕರ್ನಾಟಕ ಸರಕಾರ ಮಾಹಿತಿ ನೀಡಿದ್ದು, ರಾಜ್ಯದ ರೈತರ ಕೆಂಗಣ್ಣಿಗೆ ಗುರಿಯಾಗಿದೆ.
ಕಾವೇರಿ ನದಿಯಿಂದ ತಮಿಳುನಾಡಿಗೆ 6 ದಿನಗಳ ಕಾಲ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಪರ ವಕೀಲರು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮನವರಿಕೆ ಮಾಡಿದ್ದಾರೆ.
 
ಈ ಹಿಂದೆ ಸುಪ್ರೀಕೋರ್ಟ್ ನೀಡಿರುವ ಆದೇಶ ಪಾಲಿಸುತ್ತೇವೆ. ಈಗಾಗಲೇ ಕಾವೇರಿ ನದಿಯಿಂದ ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಎರಡು ಮೂರು ದಿಗಳಲ್ಲಿ 12 ಸಾವಿರ ಕ್ಯೂಸೆಕ್ ನೀರು ಹರಿಸುತ್ತೇವೆ ಎಂದು ರಾಜ್ಯಪರ ವಕೀಲರು ಒಪ್ಪಿಕೊಂಡಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಕುಡಿಯುವ ನೀರಿನ ಜೊತೆಗೆ ರೈತರಿಗೆ ನೀರು ಹರಿಸುವ ಸರ್ವಾನುಮತ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಆದರೆ, ರೈತರ ಹೆಸರಲ್ಲಿ ತಮಿಳುನಾಡಿಗೆ ನೀರು ಹರಿಸಲು ರಾಜ್ಯ ಸರಕಾರ ಸಂಚು ಹೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ