13,306 ಅತಿಥಿ ಶಿಕ್ಷಕರ ನೇಮಕಕ್ಕೆ ಸರಕಾರ ಸಿದ್ಧತೆ: ತನ್ವೀರ್ ಸೇಠ್

ಗುರುವಾರ, 21 ಜುಲೈ 2016 (16:21 IST)
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ 22 ಸಾವಿರ ಶಿಕ್ಷಕರ ಪೈಕಿ ಪ್ರಸಕ್ತ ಸಾಲಿನಲ್ಲಿ 13,306 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತನ್ವೀರ್ ಸೇಠ್, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ 22 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು, ಅನುಮೋದನೆ ದೊರೆತ ಕೂಡಲೇ ಸಂಪುಟದಲ್ಲಿ ಚರ್ಚಿಸಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುತ್ತೇವೆ ಎಂದು ತಿಳಿಸಿದರು. 
 
ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಪಡೆದಕೊಂಡಿದ್ದು, ಹೆಚ್ಚುವರಿಯಾಗಿ 3606 ಅತಿಥಿ ಶಿಕ್ಷಕರ ನೇಮಕಾತಿಗೆ ಸಮ್ಮತಿ ಕೇಳಿದ್ದೇನೆ ಎಂದು ತಿಳಿಸಿದರು.
 
ಪ್ರತಿ ಎರಡು ವರ್ಷದಲ್ಲಿ ನಿವೃತ್ತಿಯಾಗುವ ಶಿಕ್ಷಕರ ಅಂಕಿಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಶಿಕ್ಷಕರ ವರ್ಗಾವಣೆಯಲ್ಲಿ ತಾಲೂಕನ್ನು ಘಟಕವನ್ನಾಗಿ ಮಾಡಿಕೊಳ್ಳಲಾಗಿತ್ತು, ಆದರೆ, ಇನ್ನೂ ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಘಟಕವನ್ನಾಗಿ ಮಾಡಿಕೊಂಡು ವರ್ಗಾವಣೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ ಎಂದು ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ