ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬುಧವಾರ, 12 ಜೂನ್ 2019 (11:56 IST)
ಬೆಂಗಳೂರು : ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಅದಕ್ಕಾಗಿ  ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ನಿರ್ಧರಿಸಿರುವುದರ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.




 


ರಾಜ್ಯ ಹೆದ್ದಾರಿ ಪ್ರಾಧಿಕಾರ, ಕೆಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ ಒಟ್ಟು 25,800 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗಳು ನಿರ್ಮಾಣವಾಗುತ್ತಿದೆ, ಹಾಗೇ 2011 ರಲ್ಲಿ ಪ್ರಕಟವಾದ ಆದೇಶದಂತೆ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಿಧಿಸುವುದನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಹಿಂದಿನ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ತೀರ್ಮಾನವನ್ನೇ ನಾವು ಮುಂದುವರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 37 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 3,600 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ