ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ : ಶೆಟ್ಟರ್

ಸೋಮವಾರ, 30 ಮೇ 2016 (16:27 IST)
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಬುದ್ಧಿ ಹೇಳುವ ಧೈರ್ಯ ಇಲ್ಲವೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. 
 
ಗದಗ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಚುನಾವಣೆಗೂ ಮುನ್ನ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನೀಡುತ್ತೇವೆ ಎದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ಅಧಿಕಾರ ಬಂದ ತಕ್ಷಣ ರಾಜ್ಯ ಸಚಿವ ಸಂಪುಟದ ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
 
ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್ ಸೋಲು ಅನುಭವಿಸುತ್ತಿದೆ. ಇದರಿಂದ ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿದೆ. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ಧೈರ್ಯ ಹೈಕಮಾಂಡ್‌ಗಿಲ್ಲ. ನಮ್ಮ ರಾಜಕೀಯ ಭವಿಷ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನಂತ ದುರ್ಬಲ ಮುಖ್ಯಮಂತ್ರಿಯನ್ನು ಕಂಡಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ