ಕೊರೊನಾ ಕೇಸಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ - ಹೆಚ್ ಡಿಕೆ

ಸೋಮವಾರ, 3 ಮೇ 2021 (11:03 IST)
ಮೈಸೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಜನರ ಸಾವು ಕೇಸ್ ಸರ್ಕಾರದಲ್ಲಿರುವ ಉದಾಸೀನತೆಯೇ ಇದಕ್ಕೆ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರ  ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಸಿಎಂ ಬಿಎಸ್ ವೈ ಸಭೆಗಳನ್ನು ಮಾಡುತ್ತಿದ್ದೇವೆ ಎನ್ನುತ್ತಾರೆ. ಎಲ್ಲ ಸೌಲಭ್ಯ ಒದಗಿಸಬೇಕೆಂದು ಹೇಳಿದ್ದೇವೆ ಎನ್ನುತ್ತಾರೆ. ಇವರು ಸೌಲಭ್ಯ ಒದಗಿಸದೆ ಅವರು ಹೇಗೆ ಕೊಡುತ್ತಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣದ ಕೊರತೆಯೇ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ