ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

Sampriya

ಶನಿವಾರ, 21 ಸೆಪ್ಟಂಬರ್ 2024 (15:17 IST)
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ  ರಚಿಸಿ ಆದೇಶ ಹೊರಡಿಸಿದೆ.

 ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಗೃಹಮಂತ್ರಿ ಜಿ ಪರಮೇಶ್ವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಇದೀಗ ಮುನಿರತ್ನ ವಿರುದ್ಧ ಒಂದೊಂದೆ ಆರೋಪಗಳ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದೆ. ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನಗೆ ಜಾಮೀನು ಸಿಕ್ಕರೂ ಮಹಿಳೆ ನೀಡಿದ ಅತ್ಯಾಚಾರ ಪ್ರಕರಣದಲ್ಲಿ ಮತ್ತೇ ಜೈಲು ಸೇರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ