ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಇಲಾಖೆಯಲ್ಲಿ ಆತ್ಮಹತ್ಯೆ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಮನೋವಿಜ್ಞಾನಿಗಳಿಂದ ಕೌನ್ಸ್‌ಲಿಂಗ್ ನಡೆಸುತ್ತೇವೆ. ಯೋಗ, ಧ್ಯಾನಗಳ ಮೂಲಕ ಪೊಲೀಸರ ಒತ್ತಡವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಪ್ರಸ್ತಾಪದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಅವರು ತಮ್ಮ ವೈಯಕ್ತಿಕ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕೇಂದ್ರ ಸಂಸಧೀಯ ಸಚಿವ ಮಲ್ಲಿಕಾರ್ಜುನ್ ಖರ್ಗೆ ಕುರಿತು ಮಾತನಾಡುವ ಸಮಯದಲ್ಲಿ ಅವರು ದಲಿತ ಮುಖ್ಯಮಂತ್ರಿ ಪ್ರಸ್ತಾಪವನ್ನು ಮಾಡಿದ್ದಾರೆ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.