ಆಡಳಿತ ವೆಚ್ಚದಲ್ಲಿ ಮಿತವ್ಯಯಕ್ಕೆ ಮುಂದಾದ ರಾಜ್ಯ ಸರ್ಕಾರ

ಸೋಮವಾರ, 16 ಡಿಸೆಂಬರ್ 2019 (10:36 IST)
ಬೆಂಗಳೂರು : ಆಡಳಿತ ವೆಚ್ಚದಲ್ಲಿ ಮಿತವ್ಯಯಕ್ಕೆ ಮುಂದಾದ ರಾಜ್ಯ ಸರ್ಕಾರ ಇದೀಗ ಸರ್ಕಾರಿ ಕಚೇರಿಗಳಲ್ಲಿ ಬೇಕಾಬಿಟ್ಟಿ ದೂರವಾಣಿ ಕರೆಗೆ ಬ್ರೇಕ್ ಹಾಕಿದೆ.



ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ಕರೆಗಳಿಂದ ಟೆಲಿಫೋನ್ ಬಿಲ್ ಹೆಚ್ಚಾಗುತ್ತಿದ್ದು, ಇದರಿಂದ ಹೆಚ್ಚುತ್ತಿರುವ ಆಡಳಿತ ವೆಚ್ಚ ಕಡಿಮೆ ಮಾಡಲು ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಬೇಕಾಬಿಟ್ಟಿ ದೂರವಾಣಿ ಕರೆಗೆ ಬ್ರೇಕ್ ಹಾಕಲು ನಿರ್ಧಾರ ಮಾಡಿದೆ.
ಅದಕ್ಕಾಗಿ ದೂರವಾಣಿ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ, ಅಧಿಕಾರಿಗಳ ಕಚೇರಿ, ನಿವಾಸದ ದೂರವಾಣಿಗೆ ಹೊಂದುವ ಮಾರ್ಗಸೂಚಿಯಲ್ಲಿ ಮಾರ್ಪಾಡು ಮಾಡಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ