ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಹಾಗೂ ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಗಳು ರಾಜ್ಯ ಸರಕಾರದ ವೈಪಲ್ಯವನ್ನು ತೋರಿಸುತ್ತಿದೆ. ಈ ಪ್ರಕರಣಗಳನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಲ್ಲಪ್ಪ ಹಂಡಿಭಾಗ ಅವರು ಆತ್ಮಹತ್ಯೆಗೆ ಶರಣಾಗುವ ಮುನ್ನ ಅವರನ್ನು ಮಂಗಳೂರು ಐಬಿಗೆ ಕರೆಸಿಕೊಂಡಿರುವುದು ಏಕೆ? ಕಲ್ಲಪ್ಪ ಹಂಡಿಭಾಗ್ ಅವರ ವಿರುದ್ಧ ವ್ಯವಸ್ಥಿತವಾಗಿ ಪಿತೂರಿ ನಡೆದಿದ್ದು, ಪ್ರಕರಣದಲ್ಲಿ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.