ಕಾವೇರಿ: ತಮಿಳುನಾಡಿಗೆ ಸುಪ್ರೀಂಕೋರ್ಟ್‌ನಲ್ಲಿ ಉತ್ತರ ನೀಡುತ್ತೇವೆ ಎಂದ ಸಚಿವ ಜಯಚಂದ್ರ

ಸೋಮವಾರ, 22 ಆಗಸ್ಟ್ 2016 (16:50 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡುತ್ತೇವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡುತ್ತೇವೆ. ವಾಸ್ತವ ಪರಿಸ್ಥಿತಿ ಎಲ್ಲರಿಗೂ ಗೊತ್ತಿದೆ. ನಾವು ಕುಡಿಯಲು ನೀರು ಕೇಳಿದರೆ, ತಮಿಳುನಾಡು ಸರಕಾರ ಬೆಳೆಗೆ ನೀರು ಬಿಡಿ ಎಂದು ಕೇಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕಾವೇರಿ ನದಿಯಿಂದ 10 ದಿನಗಳಲ್ಲಿ 50 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುಲು ಕರ್ನಾಟಕ ಸರಕಾರಕ್ಕೆ ಸೂಚಿಸುವಂತೆ ಕೋರಿ ಇಂದು ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
 
ಜೂನ್ ಮತ್ತು ಜುಲೈ ತಿಂಗಳಲ್ಲಿ ನಮಗೆ ಸಲ್ಲಬೇಕಾಗಿದ್ದ ನೀರನ್ನು ಕರ್ನಾಟಕ ರಾಜ್ಯ ನೀಡಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕರ್ನಾಟಕ ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ