ರಾಜ್ಯ ಮಟ್ಟದ ಕಾನೂನು ವಿದ್ಯಾರ್ಥಿಗಳ ಸಮ್ಮೇಳನ

ಗುರುವಾರ, 23 ಆಗಸ್ಟ್ 2018 (19:32 IST)
ಕಾನೂನು ವಿಶ್ವವಿದ್ಯಾಲಯ ಪ್ರಾರಂಭವಾಗಿ ಹತ್ತು ವರ್ಷಗಳಾದ ಹಿನ್ನಲೆಯಲ್ಲಿ ರಾಜ್ಯ ಮಟ್ಟದ ಕಾನೂನು ವಿದ್ಯಾರ್ಥಿಗಳ ಸಮ್ಮೇಳನವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ.

ಕಾನೂನು ವಿಶ್ವವಿದ್ಯಾಲಯ ಪ್ರಾರಂಭವಾಗಿ ಹತ್ತು ವರ್ಷಗಳಾದ ಹಿನ್ನಲೆಯಲ್ಲಿ ರಾಜ್ಯ ಮಟ್ಟದ ಕಾನೂನು ವಿದ್ಯಾರ್ಥಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಹೀಗಂತ ಹುಬ್ಬಳ್ಳಿಯಲ್ಲಿ ಎಬಿವಿಪಿ ಕಾರ್ಯದರ್ಶಿ ಹರ್ಷನಾರಾಯಣ ಹೇಳಿಕೆ ನೀಡಿದ್ದಾರೆ. ಎಬಿವಿಪಿಯಿಂದ ರಾಜ್ಯ ಮಟ್ಟದ ಕಾನೂನು ವಿದ್ಯಾರ್ಥಿಗಳ ಸಮ್ಮೇಳನ ಆಯೋಜನೆ ಮಾಡಲಾಗಿದೆ. ಕಾನೂನು ಸುಧಾರಣೆ ಕುರಿತು ಚರ್ಚಾಗೋಷ್ಠಿ, ವಿವಿ ಪರೀಕ್ಷಾ ಸುಧಾರಣೆ, ಮೌಲ್ಯಮಾಪನ ಗೊಂದಲ, ಮಾತೃಭಾಷೆ ಪಠ್ಯಪುಸ್ತಕದ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಬಯೋ ಸಭಾಂಗಣದಲ್ಲಿ ಆಗಸ್ಟ್ 25ರಂದು   ಸಮ್ಮೇಳನ ನಡೆಯಲಿದೆ. ನೂರು ಕಾಲೇಜುಗಳು 600 ಕಾನೂನು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.





 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ