ರಾಜ್ಯ ಉಸ್ತುವಾರಿ ವೇಣುಗೋಪಾಲ್ ರಹಸ್ಯ ಸಭೆ

ಶುಕ್ರವಾರ, 5 ಜನವರಿ 2018 (13:35 IST)
ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಸಂಸದರಾದ ಮುದ್ದಹನುಮೇಗೌಡ ಸೇರಿದಂತೆ ಪ್ರಮುಖರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ.
 
ತುಮಕೂರಿನ ವಿಶ್ವವಿದ್ಯಾಲಯದ ವಿಶ್ರಾಂತಿ ಗೃಹದಲ್ಲಿ ಈ ಸಭೆ ನಡೆದಿದ್ದು, ಎರಡು ಗಂಟೆಗಳ ಕಾಲ ಮಾತುಕತೆ ನಡೆದಿದೆ ಎನ್ನಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವೇಣುಗೋಪಾಲ್ ವ್ಯಕ್ತಪಡಿಸಿದ್ದಾರೆ. 
 
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಯಾವುದೇ ರೀತಿಯ ತಂತ್ರಗಾರಿಕೆ ನಡೆಸಿದರೂ ಅದು ನಡೆಯುವುದಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ