ಮಹಾದಾಯಿ ವಿವಾದದಲ್ಲಿ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಲಿ: ರಾಮಲಿಂಗಾರೆಡ್ಡಿ
ಶುಕ್ರವಾರ, 29 ಜುಲೈ 2016 (19:28 IST)
ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿಚಾರವಾಗಿ ರಾಜ್ಯದ ಸಂಸದರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿದ್ದರೆ ಬಿಜೆಪಿಯವರನ್ನು ಕೇಳುವ ಪ್ರಶ್ನೆಯೇ ಇರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
ಮಹದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ವ್ಯರ್ಥವಾಗುವ 200 ಟಿಎಂಸಿ ನೀರಿನಲ್ಲಿ 7 ಟಿಎಂಸಿ ನೀರು ರಾಜ್ಯಕ್ಕೆ ನೀಡಬಹುದಿತ್ತು. ರಾಜ್ಯ ಸಂಸದರು ಮನಸ್ಸು ಮಾಡಿ ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ತಂದು ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.