ಕಾವೇರಿ ವಿವಾದದಲ್ಲಿ ರಾಜಕಾರಣಿಗಳು ಒಗ್ಗಟ್ಟಾಗಿ ಸರಕಾರವನ್ನು ಬೆಂಬಲಿಸಿಲಿ: ಖರ್ಗೆ ಸಲಹೆ

ಗುರುವಾರ, 22 ಸೆಪ್ಟಂಬರ್ 2016 (15:24 IST)
ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದ್ರೆ ರಾಜ್ಯಕ್ಕೆ ಅನ್ಯಾಯವಾಗುತ್ತೆ. ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ರಾಜ್ಯ ಸರಕಾರಕ್ಕೆ ಬೆಂಬಲ ನೀಡಬೇಕು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯಕ್ಕೆ ದೊಡ್ಡ ಪೆಟ್ಟು ನೀಡಿದೆ. ಈ ಆದೇಶದಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. 
 
ಬಹು ಸಂಖ್ಯಾತ ಐಟಿ ಬಿಟಿ ಸಂಸ್ಥೆಗಳು ರಾಜಧಾನಿ ಬೆಂಗಳೂರಿನಲ್ಲಿವೆ. ಬೆಂಗಳೂರು ಅಭಿವೃದ್ಧಿ ಹೊಂದುತ್ತೆ ಅನ್ನೂ ಕುತಂತ್ರವೂ ಈ ತೀರ್ಪಿನ ಹಿಂದಿರಬಹುದು ಎಂದು ಆರೋಪಿಸಿದರು.
 
ರಾಜ್ಯದಲ್ಲಿ ಕುಡಿಯುವ ನೀರಿಗೂ ಸಂಕಷ್ಟವಿದೆ. ಸುಪ್ರೀಂ ಕೋರ್ಟ್ ಯಾವ ಮಾನದಂಡದ ಮೇಲೆ ಈ ರೀತಿಯ ತೀರ್ಪು ನೀಡಿದೆ ತಿಳಿಯುತ್ತಿಲ್ಲ. ಇದು ರಾಜ್ಯದ ಜನತೆಯ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.   
 
ಉಭಯ ರಾಜ್ಯಗಳ ಜಲ ವಿವಾದದಲ್ಲಿ ಪ್ರಧಾನಿ ಅವರಿಗೆ ಜವಾಬ್ದಾರಿ ಇಲ್ಲ ಎಂದು ಕೈ ಎತ್ತಕ್ಕಾಗುತ್ತಾ. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳ ಸಮಸ್ಯೆಗಳಿಗೆ ಪ್ರಧಾನಿ ಸ್ಪಂದಿಸಬೇಕು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ