ರಾಜ್ಯದ ಬಂದರು, ವಿಮಾನನಿಲ್ದಾಣ ಖಾಸಗೀಕರಣಕ್ಕೆ ಕೇಂದ್ರ ಯತ್ನ: ಆರೋಪ

ಶನಿವಾರ, 29 ಡಿಸೆಂಬರ್ 2018 (19:45 IST)
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರನ್ನು  ಖಾಸಗೀಕರಣ  ಗೊಳಿಸಲು ಮುಂದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎ. ಸಿ. ವಿನಯರಾಜ್ ಆರೋಪಿಸಿದ್ದಾರೆ.

ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ವಿನಯರಾಜ್, ಬಿಜೆಪಿಯವರು ಚುನಾವಣೆ ಸಮೀಪಿಸುತ್ತಿದಂತೆಯೇ ಕರಾವಳಿ ಭಾಗಕ್ಕೆ  ಹಲವು ಕೊಡುಗೆ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಎಣ್ಣೆ ಹೊಳೆಯಿಂದ ಬಿ.ಸಿ.ರೋಡ್ ವರೆಗಿನ ಚತುಷ್ಪಥ  ರಸ್ತೆ ಕಾಮಗಾರಿ  ಅರ್ಧದಲ್ಲಿಯೇ ಸ್ಥಗಿತಗೊಂಡಿದೆ. ಕಿದು ಗ್ರಾಮದ ತೆಂಗು ಅಭಿವೃದ್ಧಿ  ಸಂಶೋಧನಾ  ಕೇಂದ್ರವನ್ನು ಹೈದರಾಬಾದ್  ಗೆ ಸ್ಥಳಾಂತರಿಸಲು  ಕೇಂದ್ರ ಸರಕಾರ ಪ್ರಕ್ರಿಯೆ ಆರಂಭಿಸಿದೆ. ಪಂಪ್ ವೆಲ್ ಹಾಗೂ ಮೇಲ್ಸುತುವೆ  ಕಾಮಗಾರಿ ಕೂಡಾ ಆಮೆಗತಿಯಲ್ಲಿ ಸಾಗಿದೆ.

ಇದಕ್ಕೆ ಸಂಸದರು ಸೇರಿದಂತೆ ಬಿಜೆಪಿ ನಾಯಕರು ಯಾರೂ ಮಾತನಾಡುತ್ತಿಲ್ಲ. ಈ ಬಗ್ಗೆ ಬಿಜೆಪಿಯವರು   ಶ್ವೇತ ಪತ್ರ ಹೊರಡಿಸಲಿ  ಎಂದು ಒತ್ತಾಯಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ಕೇಂದ್ರ ಸರಕಾರ ಈಗಾಗಲೇ ನವ ಮಂಗಳೂರು ಬಂದರನ್ನು ಖಾಸಗೀಕರಣ ಮಾಡಲು ಮುಂದಾಗಿದೆ. 14 ಬರ್ಥ್ ನಿರ್ವಹಣೆ ಖಾಸಗಿ ಅವರಿಗೆ ನೀಡಲಾಗಿದೆ ಎಂದು ಹೇಳಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ