ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಶುಕ್ರವಾರ, 3 ಮೇ 2019 (06:58 IST)
ಬೆಂಗಳೂರು : ಲೋಕಸಭಾ ಚುನಾವಣೆ ಮುಗಿಯುತ್ತಿರುವ ಈ ಬೆನ್ನಲ್ಲೇ ಇದೀಗ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚುನಾವಣಾಧಿಕಾರಿ ಮುಹೂರ್ತ ಘೋಷಣೆ ಮಾಡಿದ್ದಾರೆ.




ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಚುನಾವಣಾಧಿಕಾರಿಗಳು, ರಾಜ್ಯದ 8 ನಗರ ಸಭೆ, 33 ಪುರಸಭೆ, 22 ಪಟ್ಟಣ ಪಂಚಾಯತಿ, 63 ಸ್ಥಳೀಯ ಸಂಸ್ಥೆಗಳಿಗೆ ಹಾಗೂ 1,361 ವಾರ್ಡ್ ಗಳಿಗೆ ಮೇ 29 ರಂದು  ಚುನಾವಣೆ ನಡೆಯುವುದಾಗಿ ಘೋಷಣೆ ಮಾಡಿದ್ದಾರೆ.


ಹಾಗೇ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಾಮಪತ್ರ ಸಲ್ಲಿಕೆಯು ಮೇ 9 ರಿಂದ ಶುರುವಾಗಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 29 ರಂದು ಮತದಾನ ನಡೆಯಲಿದ್ದು, ಮೇ 31ಕ್ಕೆ ಫಲಿತಾಂಶ ಪ್ರಕಟವಾಗಲಿರುವುದಾಗಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ