ಸರ್ಕಾರದ ವಿರುದ್ಧ ಇಂದು ಮತ್ತೆ ರಾಜ್ಯ ಸಾರಿಗೆ ನೌಕರರ ಹೋರಾಟ

ಬುಧವಾರ, 8 ಫೆಬ್ರವರಿ 2023 (13:55 IST)
6 ವರ್ಷ ಕಳೆದರೂ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡದ ಹಿನ್ನೆಲೆ ಇಂದು ಮತ್ತೆ ಸಾರಿಗೆ ನೌಕರರು ಧರಣಿ ನಡೆಸುತ್ತಿದ್ದಾರೆ.ಕಳೆದ ಒಂದು ವಾರದ ಹಿಂದೆ ಸರ್ಕಾರದ ವೇತನ ಹೆಚ್ಚಿಸಲು ಆಗ್ರಹಿಸಿ ಧರಣಿ ನಡೆಸಿದ್ದರು.ಆದ್ರೂ ಕ್ಯಾರೇ ಅನ್ನದ ಸರ್ಕಾರದ ಧೋರಣೆ  ಖಂಡಿಸಿ ಮತ್ತೆ ಇಂದು ಬೀದಿಗಿಳಿಯಲು ತೀರ್ಮಾನ ಮಾಡಿದ್ದು,ಸಾರಿಗೆ ನೌಕರರಿಂದ ಸರ್ಕಾರದ ಗಮನ ಸೆಳೆಯಲು ಮತ್ತೆ ಬೃಹತ್ ಧರಣಿ ಸತ್ಯಾಗ್ರಹ ಮಾಡ್ತಿದ್ದಾರೆ.
 
ನಾಲ್ಕು ನಿಗಮದ ನೌಕರರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021 ರ ಏಪ್ರಿಲ್ ನಲ್ಲಿ 15 ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು .ಆದ್ರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಏಣಿಸಿದೆ.ಹೀಗಾಗಿ ಸಾರಿಗೆ ನಿಗಮಗಳ ನಿರ್ಲಕ್ಷ್ಯ ನಡೆಯಿಂದ ಇಂದು  ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ಮಾಡಿಕೊಂಡಿದ್ದು,ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಅಸಮಾಧಾನ ಹೊರಹಾಕ್ತಿದ್ದಾರೆ.
 
ಸಾರಿಗೆ ನಿಗಮಗಳ ನಿರ್ಲಕ್ಷ್ಯ ನಡೆಯಿಂದ ಬೇಸತ್ತಿದ್ದು, ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ.ನಿಯಮಬದ್ಧವಾಗಿ 2020 ಮಾರ್ಚ್ ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು.ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ ಬಿಎಂಟಿಸಿ,ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1 ಲಕ್ಷ ,30 ನೌಕರರು ಅಸಮಾಧಾನ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ