ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪುನೀತ್ ಪ್ರತಿಮೆ

ಸೋಮವಾರ, 1 ನವೆಂಬರ್ 2021 (16:52 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅವರಣದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ, ಬೆಂಗಳೂರಿನ ನಾಗರಿಕರಿಗೆ 66ನೇ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಮತ್ತು ಯುವಕರ ಆಶಾಕಿರಣ, ಪವರ್ ಸ್ಟಾರ್, ರಾಷ್ಟ ಪ್ರಶಸ್ತಿ ಪುರಸ್ಕೃತ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಹೊಂದಿರುವುದು ದುಖಃಕರ ಸಂಗತಿ. ರಾಜ್ಯಕ್ಕೆ ತುಂಬಾಲಾರದ ನಷ್ಟವಾಗಿದೆ.
ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದರು.
 
ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ಈಗಾಗಲೇ ಡಾ. ರಾಜ್ ಕುಮಾರ್ ಅವರ ಪ್ರತಿಮೆ ಇದೆ. ಅದರ ಪಕ್ಕದಲ್ಲೇ ದಿ.ಪುನೀತ್ ರಾಜ್ ಕುಮಾರ್ ರವರ ಕಂಚಿನ ಪ್ರತಿಮೆ ಸ್ಥಾಪಿಸಲು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ