ಸ್ಟೀಲ್ ಬ್ರಿಡ್ಜ್ ನಿರ್ಮಾಣ: ಸಚಿವ ಜಾರ್ಜ್‌ಗೆ ಅನಂತಕುಮಾರ್ ಪತ್ರ

ಮಂಗಳವಾರ, 25 ಅಕ್ಟೋಬರ್ 2016 (14:45 IST)
ಸ್ಟೀಲ್ ಬ್ರಿಡ್ಜ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತಕುಮಾರ್ ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
 
ರಾಜ್ಯ ಸರಕಾರ ರೂಪಿಸಿರುವ ಸ್ಟೀಲ್ ಬ್ರಿಡ್ಜ್ ಯೋಜನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ. ಮಾಹಿತಿ ನೀಡದೆ ಬ್ರಿಡ್ಜ್ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪತ್ರ ಬರೆದಿದ್ದಾರೆ.
 
ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮದ ಕುರಿತು ಅಧ್ಯಯನ ನಡೆಯಲಿ. ಅಧ್ಯಯನ ನಡೆಸದೆ ಬ್ರಿಡ್ಜ್ ನಿರ್ಮಾಣ ಮಾಡುವುದು ಬೇಡ ಎಂದು ಕೇಂದ್ರ ಸಚಿವ ಅನಂತಕುಮಾರ್ ಪತ್ರದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
 
ಸಾಕಷ್ಟು ವಿರೋಧದ ನಡುವೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಈ ಕುರಿತು ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ