ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದು: ಬಿಜೆಪಿ ಹೋರಾಟಕ್ಕೆ ಜಯ ಎಂದ ಶೆಟ್ಟರ್
ಗುರುವಾರ, 2 ಮಾರ್ಚ್ 2017 (15:15 IST)
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸುವಂತೆ ಗ್ರೀನ್ ಸಿಗ್ನಲ್ ನೀಡಿರುವುದು ಬಿಜೆಪಿ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಪರಿಸರಕ್ಕೆ ಧಕ್ಕೆಯಾಗುವುದಲ್ಲದೇ, ಹೆಚ್ಚು ಹಣ ವೆಚ್ಚವಾಗುವಂತಹದು. ಆದ್ದರಿಂದ ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದವು ಎಂದು ತಿಳಿಸಿದ್ದಾರೆ.
ಆರಂಭದಿಂದಲೂ ಬಿಜೆಪಿ ಸ್ಟೀಲ್ ಬ್ರಿಡ್ಜ್ ನಿರ್ಮಾಣವನ್ನು ವಿರೋಧಿಸಿದೆ. ಆದರೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಹಠಮಾರಿ ಧೋರಣೆ ತಳೆದು ನಿರ್ಮಾಣಕ್ಕೆ ಮುಂದಾಗಿತ್ತು ಎಂದು ಅಸಮಾದಾನ ವ್ಯಕ್ತಪಡಿಸಿದರು.
ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸಿದ್ದರಿಂದ ಬಿಜೆಪಿ ಸುಮ್ಮನಾಗುವುದಿಲ್ಲ. ಯೋಜನೆ ಆರಂಭಕ್ಕೂ ಮುನ್ನ ಕಿಕ್ ಬ್ಯಾಕ್ ಹಣವನ್ನು ಯಾರು ಪಡೆದಿದ್ದರು. ಪಡೆದ ಹಣವೆಷ್ಟು ಎನ್ನುವ ಬಗ್ಗೆ ಕೆಲವೇ ದಿನಗಳಲ್ಲಿ ಸಂಪೂರ್ಣ ವರದಿ ಬಹಿರಂಗಪಡಿಸಲಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.