ವೋಟಿಗಾಗಿ ನೋಟು ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಬಿ.ಆರ್.ಪಾಟೀಲ್ ಸ್ಪಷ್ಟನೆ

ಬುಧವಾರ, 8 ಜೂನ್ 2016 (18:38 IST)
ರಾಜ್ಯಸಭೆ ಚುನಾವಣೆಗೆ ವೋಟಿಗಾಗಿ ನೋಟು ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
 
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ವೋಟಿಗಾಗಿ ನೋಟು ಪ್ರಕರಣ ಕುರಿತು ಖಾಸಗಿ ವಾಹಿನಿ ನಡೆಸಿರುವ ಕುಟುಕು ಕಾರ್ಯಾಚರಣೆಯಲ್ಲಿ ನನ್ನ ಪಾತ್ರವಿಲ್ಲ. ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಹೇಳಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನನ್ನ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ, ನಾನು ಯಾರಿಗೂ ಮತ ನೀಡುತ್ತೇನೆ ಎಂದು ಹೇಳಿರಲಿಲ್ಲ. ಯಾರು ಹಣದ ಆಮಿಷವೂ ಒಡ್ಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕುಟುಕು ಕಾರ್ಯಚರಣೆ ಹೆಸರಲ್ಲಿ ನನ್ನ ತೇಜೊವಧೆ ನಡೆದಿದೆ. ಈ ಕುರಿತು ಖಾಸಗಿ ಸುದ್ದಿ ವಾಹಿನಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಕುಟುಕು ಕಾರ್ಯಚರಣೆ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮನವಿ ಮಾಡಿಕೊಂಡಿದ್ದೇನೆ ಎಂದು ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ