JNU ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ

ಗುರುವಾರ, 26 ಜನವರಿ 2023 (15:29 IST)
ಮೋದಿ ಸಾಕ್ಷ್ಯಚಿತ್ರ ವೀಕ್ಷಿಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟದ ಆರೋಪಗಳು ಕೇಳಿ ಬಂದಿವೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಾಚಿತ್ರವನ್ನು ಪ್ರದರ್ಶಿಸುವ ಕೆಲವು ವಿದ್ಯಾರ್ಥಿಗಳ ಯೋಜನೆ ವಿಫಲವಾಗಿದೆ. ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆಯಲು ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು ಜೊತೆಗೆ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರ ನೋಡುತ್ತಿದ್ದವರ ಮೇಲೆ ಎಬಿವಿಪಿಯವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಎಡಪಂಥೀಯ ಬೆಂಬಲಿಗರು ಇಬ್ಬರು ವಿದ್ಯಾರ್ಥಿಗಳನ್ನು ಹಿಡಿದಿದ್ದು ಅವರು ಕಲ್ಲುಗಳನ್ನು ಎಸೆಯುತ್ತಿದ್ದರು ಎಂದು ದೂರಿದ್ದಾರೆ. ಇವರಿಬ್ಬರು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿಗಳ ವಿಭಾಗವಾದ ಎಬಿವಿಪಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ. ಎಬಿವಿಪಿಯ ವಿದ್ಯಾರ್ಥಿಗಳು ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಎನ್.ಸಾಯಿ ಬಾಲಾಜಿ ಹೇಳಿದ್ದಾರೆ. ಸಾಯಿ ಬಾಲಾಜಿ ಮಾದ್ಯಮದ ಮುಂದೆ ಮತ್ತಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಮುಖ್ಯ ಗೇಟ್ ಕಡೆಗೆ ಬಂದಿದ್ದೇವೆ. ತುರ್ತು ವಿದ್ಯುತ್ ಮರುಸ್ಥಾಪನೆಯನ್ನು ಬಯಸಿದ್ದೆವು. ವಿದ್ಯುತ್ ಮರುಸ್ಥಾಪಿಸುವವರೆಗೆ ನಾವು ಗೇಟ್‌ನಿಂದ ಕದಲುವುದಿಲ್ಲ. ನಮ್ಮ ಕರೆಗಳಿಗೆ ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಸಾಯಿ ಬಾಲಾಜಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ