ಗಣೇಶ ಉತ್ಸವದಲ್ಲಿ ಕಲ್ಲು ತೂರಾಟ ನಡೆದದ್ದು ಯಾಕೆ ಗೊತ್ತಾ?
ಗಣೇಶ ಮೂರ್ತಿ ವಿಸರ್ಜನೆ ಉತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ಪಟ್ಟಣದಲ್ಲಿ ಪ್ರತಿಷ್ಠಾಪನೆ ಮಾಡಿರುವ 11 ದಿನಗಳ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮೆರವಣಿಗೆ ಮುಖ್ಯ ಬಜಾರ ಮಾರ್ಗವಾಗಿ ಆಗಮಿಸಿತು.
ಆಗ ನಡೆದ ಕೋಮು ಗಲಭೆಯಲ್ಲಿ ಕಲ್ಲು ತೂರಾಟ ನಡೆಯಿತು. ಘಟನೆಯಲ್ಲಿ ಗಣೇಶ ಮೂರ್ತಿಯೂ ಭಗ್ನಗೊಂಡಿತು. ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡರು.
ಕಾಳಗಿ ಪೊಲೀಸ್ ಠಾಣೆ ಮುಂದೆ ಜನರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಒತ್ತಾಯಿಸಿದರು.