ಸಾರಿಗೆ ನೌಕರರ ಮುಷ್ಕರ: ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ!

ಸೋಮವಾರ, 25 ಜುಲೈ 2016 (09:12 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಇಂದು ರಾಜ್ಯಾದ್ಯಂತ ಮುಷ್ಕರ ಕೈಕೊಂಡಿದ್ದಾರೆ. ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತವಾದ ಹಿನ್ನೆಲೆಯಲ್ಲಿ ಬಹುತೇಕ ಶಾಲಾ ಕಾಲೇಜ್‌ಗಳಿಗೆ ರಜೆ ಘೋಷಿಸಲಾಗಿದೆ.
 
ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನೌಕರ ಸಂಘಗಳ ಜೊತೆ ನಡೆಸಿದ ಮಾತುಕತೆ ವಿಫಲವಾಗಿದ್ದು, ನೌಕರರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಕೈಕೊಂಡಿದ್ದಾರೆ. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
 
ಯಶವಂತಪುರ, ತುಮಕೂರು, ಮೈಸೂರು ಬ್ಯಾಂಕ್ ರಸ್ತೆ ಸೇರಿದಂತೆ ಹಲವು ಕಡೆ ಸರ್ಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮುನ್ನೆಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ