ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

Sampriya

ಶುಕ್ರವಾರ, 31 ಅಕ್ಟೋಬರ್ 2025 (19:17 IST)
ಬೆಂಗಳೂರು: ಪೊಲೀಸ್ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಅದನ್ನು ಸಹಿಸುವುದಿಲ್ಲ. ಇದರ ಪರಿಣಾಮ ತುಂಬಾನೇ ಕಠಿಣವಾಗಿರುತ್ತದೆ ಮತ್ತು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಹೇಳಿದರು. 

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ ಶಿವಕುಮಾರ್ ಕೆ ಅವರು ತಮ್ಮ ಮಗಳ ಸಾವಿನ ವಿಚಾರಲದಲ್ಲಿ ಹಂತದಲ್ಲೂ ಹೇಗೆಲ್ಲ ಲಂಚಕ್ಕೆ ಬೇಡಿಕೆ ಇಡಲಾಯಿತು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದರು.

ನಾವು ಲಂಚ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಅದು ಯಾವಾ ಇಲಾಖೆಯಲ್ಲಿ ಆಗಲಿ ಎಂದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಚ ಸ್ವೀಕರವನ್ನು ನಾವು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಈ ಬಗ್ಗೆ ದೂರು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ, ಇಲಾಖಾ ವಿಚಾರಣೆಯನ್ನು ಪ್ರಾರಂಭಿಸುತ್ತೇವೆ ಮತ್ತು ಅವರನ್ನು ಅಮಾನತುಗೊಳಿಸುತ್ತೇವೆ.

ಒಂದು ವೇಳೆ ಆರೋಪಗಳು ಸಾಬೀತಾದಲ್ಲಿ ಅಂತವರನ್ನು ಸೇವೆಯಿಂದ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದರು. 

ಅಂತಹ ಘಟನೆಗಳು ನಮ್ಮ ಹಿರಿಯ ಅಧಿಕಾರಿಗಳ ಗಮನಕ್ಕೆ ಅಥವಾ ನಮ್ಮ ಗಮನಕ್ಕೆ ಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ನಿರ್ದಿಷ್ಟ ಸೂಚನೆ ನೀಡಲಾಗಿದೆ. ಪೊಲೀಸ್ ಕಾನ್ಫರೆನ್ಸ್‌ಗಳಲ್ಲಿ ಸಿಎಂ ಕೂಡಾ ಇದನ್ನೇ ಹೇಳಿದ್ದಾರೆ. ಇಂತಹ ಘಟನೆಗಳನ್ನು ಪ್ರೋತ್ಸಾಹಿಸುವುದಿಲ್ಲ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ