ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಪೊಲೀಸರಿ ಕಠಿಣ ಶಿಕ್ಷೆ

ಗುರುವಾರ, 8 ಡಿಸೆಂಬರ್ 2016 (09:57 IST)
ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ನೋಟು ಬದಲಾವಣೆ, ರಿಯಲ್ ಎಸ್ಟೇಟ್ ನಂತಹ ದಂಧೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳೇ ಭಾಗಿಯಾಗುತ್ತಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
 
ಕ್ರಿಮಿನಲ್ ಚಟುವಟಿಕೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗಿಯಾಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ನಿತ್ಯ ಸುದ್ದಿಗಳು ಬಿತ್ತರವಾಗುತ್ತಿವೆ. ಇಂತಹ ಪ್ರಕರಣಗಳು ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಈ ಪ್ರಕರಣಗಳಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕಬೇಕು. ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶ ನೀಡಿದರು.
 
ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ಎಂದು ಮುಖ್ಯಮಂತ್ರ್ರಿಯವರು ಸೂಚಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ