ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ,296 ಜನ ದುರ್ಮರಣ

ಭಾನುವಾರ, 10 ಸೆಪ್ಟಂಬರ್ 2023 (18:00 IST)
ಮೊರಾಕ್ಕೋದ  ಮರಕೇಶ್ನ ನೈಋತ್ಯ ಭಾಗದಲ್ಲಿ ನಿನ್ನೆ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮರಕೇಶ್ನ ನೈಋತ್ಯಕ್ಕೆ 44 ಮೈಲಿ ಅಂದ್ರೆ 71 ಕಿಲೋಮೀಟರ್ ದೂರದಲ್ಲಿ ರಾತ್ರಿ 11:11 ಕ್ಕೆ 18.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 296 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿವೆ.ರಾಜಧಾನಿ ರಬಾತ್‌ನಿಂದ ದಕ್ಷಿಣಕ್ಕೆ 320 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ನಗರ ಮರ್ರಾಕೆಚ್ ಪ್ರದೇಶದಲ್ಲಿ 27 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣಕ್ಕೆ ಔರ್ಜಾಜೆಟ್ ಪ್ರಾಂತ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ