ಸರಕಾರ ಹಾಗೂ ನೌಕರರ ಸಂಘಟನೆಗಳು ಹಠಮಾರಿ ಧೋರಣೆಯನ್ನು ಬಿಡಬೇಕು: ಆರ್‌.ಅಶೋಕ್

ಸೋಮವಾರ, 25 ಜುಲೈ 2016 (11:24 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರಕಾರ ಹಾಗೂ ನೌಕರರ ಸಂಘಟನೆಗಳು ಹಠಮಾರಿ ಧೋರಣೆಯನ್ನು ಬಿಡಬೇಕು ಎಂದು ಮಾಜಿ ಡಿಸಿಎಂ ಆರ್‌.ಅಶೋಕ್ ಆಗ್ರಹಿಸಿದ್ದಾರೆ.
 
ರಾಜ್ಯಾದ್ಯಂತ ಸಾರಿಗೆ ನೌಕರರು ಕೈಗೊಂಡಿರುವ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರಕಾರ ಹಾಗೂ ನೌಕರರ ಸಂಘಟನೆಗಳು ಹಠಮಾರಿ ಧೋರಣೆಯನ್ನು ಬಿಡಬೇಕು. ಈ ಕುರಿತು ಸರಕಾರ ಹಾಗೂ ನೌಕರರ ಸಂಘಟನೆಗಳು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿ ಎಂದು ತಿಳಿಸಿದರು.
 
ನೌಕರರ ಸಂಘಟನೆಯ ಬೇಡಿಕೆಯಂತೆ 35 ಪ್ರತಿಶತ ವೇತನವನ್ನು ಹೆಚ್ಚಳ ಮಾಡುವುದು ಅಸಾಧ್ಯ. ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವ ಮೂಲಕ ಸಮಸ್ಯೆಯನ್ನು ಜಟಿಲ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
 
ಸಾರಿಗೆ ನೌಕರರ ಸಂಘಟನೆಗಳು ಇಂದು ರಾಜ್ಯಾದ್ಯಂತ ಬಸ್‌ ಬಂದ್‌ಗೆ ಕರೆ ನೀಡಿರುವುದು ರಾಜ್ಯ ಸರಕಾರಕ್ಕೆ ಮಾಹಿತಿ ಇರಲಿಲ್ಲವೆ. ನೌಕರರ ಸಂಘಟನೆಗಳ ಜೊತೆ ಸಂದಾನ ಸಭೆ ನಡೆಸಲು ರಾಜ್ಯ ಸರಕಾರ ವಿಫಲವಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಮಾಜಿ ಡಿಸಿಎಂ ಆರ್‌.ಅಶೋಕ್ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ