ಅವಿನಾಶ್ ಕುಮಾರ್ ಯಾದವ್(34) ಇಂತಹ ನೀಚ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಮುಂಬೈನ ಪ್ರತಿಷ್ಠಿತ ಐಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಸೈಕೋ ವಿದ್ಯಾರ್ಥಿ ಶುಕ್ರವಾರ ರಾತ್ರಿ ಮಹಿಳೆಯೊಬ್ಬಳು ಸ್ನಾನ ಮಾಡುವಾಗ ಬಾತ್ ರೂಮಿನ ಕಿಟಕಿಯಲ್ಲಿ ಮೊಬೈಲ್ ಇಟ್ಟಿದ್ದಾನೆ. ಇದನ್ನು ಕಂಡ ಮಹಿಳೆ ತಕ್ಷಣ ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಆಗ ಮೊಬೈಲ್ ವಶಕ್ಕೆ ಪಡೆದುಕೊಂಡ ಪತಿ ಈ ಬಗ್ಗೆ ಕಪೂರ್ ಬ್ವಾದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಅವಿನಾಶ್ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಲು ಯತ್ನಿಸುತ್ತಿದ್ದ ಅವಿನಾಶ್ ನನ್ನು ಅಕ್ಕ-ಪಕ್ಕದ ನಿವಾಸಿಗಳ ಸಹಾಯದಿಂದ ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.