ರಾಜಧಾನಿಯಲ್ಲಿ ಬಾಂಬ್ ಬೆದರಿಕೆ ವಿದ್ಯಾರ್ಥಿ ಬಂಧನ

ಮಂಗಳವಾರ, 19 ಜುಲೈ 2022 (18:33 IST)
ಆರ್. ಆರ್ ನಗರದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಸ್ಕೂಲ್ ಗೆ ಅದೇ ಶಾಲೆಯ 10ನೇ ತರಗತಿ ಓದುತ್ತಿದ್ದ ವಿಧ್ಯಾರ್ಥಿ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಿರುವುದಾಗಿ ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
 
ಜುಲೈ 21 ರಂದು 10 ನೇ ತರಗತಿಯ ಮೊದಲ ಸೆಮಿಸ್ಟರ್ ಪರೀಕ್ಷೆ ಇತ್ತು.
ಹೀಗಾಗಿ ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲ್ಯಾನ್ ಮಾಡಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರ್. ಆರ್. ನಗರ ಪೊಲೀಸರು ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯನ್ನು ಪತ್ತೆ ಮಾಡಿದ್ದಾರೆ.
 
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಆರ್ ಆರ್ ನಗರ ಪೊಲೀಸರು, ಹುಡುಗನನ್ನ ವಿಚಾರಣೆ ನಡೆಸಿ ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ