ಬಾತ್ ರೂಂನಲ್ಲಿ ಹುಡುಗಿಯರ ನಗ್ನ ವಿಡಿಯೋ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್
ಬೆಂಗಳೂರಿನ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ 21 ವರ್ಷದ ಸಿದ್ಧಾರ್ಥ್ ಎಂಬಾತ ತನ್ನ ಗರ್ಲ್ ಫ್ರೆಂಡ್ ಸಹಾಯದಿಂದ ಇಂತಹ ಕೆಲಸ ಮಾಡುತ್ತಿದ್ದ. ಈತನನ್ನು ಇದೀಗ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಈತನ ಗೆಳತಿಯನ್ನೂ ವಶಕ್ಕೆ ಪಡೆದು ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಆಕೆಯ ಹೇಳಿಕೆ ಪ್ರಕಾರ ಆರೋಪಿ ವಿದ್ಯಾರ್ಥಿ ಬೆದರಿಸಿ ವಿಡಿಯೋ ಚಿತ್ರೀಕರಿಸಿ ಕಳುಹಿಸಲು ಹೇಳುತ್ತಿದ್ದ. ಈ ವಿಡಿಯೋಗಳನ್ನು ಆತ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ. ಇದೀಗ ಆಕೆಯ ಹೇಳಿಕೆಗಳ ಸತ್ಯಾಸತ್ಯತೆ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.