ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ರಾಯಚೂರು ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಲೀಡ್ ಕಾಲೇಜಿನ ಕಳೆದ 4ದಿನಗಳಿಂದ ಪ್ರಾರಂಭವಾಗಿದ್ದು. ಕಾಲೇಜಿನ ಸ್ನಾತಕ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದರ ಲಾಭ ಪಡೆದು ಕೊಳ್ಳುತ್ತಿದ್ದಾರೆ.
ಕಾಲೇಜಿನ ಐಡಿ ಹಾಗೂ ಆಧಾರ್ ಗುರುತಿನ ಚೀಟಿ ಇರುವವರಿಗೆ ಲಸಿಕೆ ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಆದೇಶ ಬಂದಿತ್ತು.
ಈ ಸಂಬಂಧ ಕಾಲೇಜು ಮಟ್ಟದಲ್ಲಿ ಪರ್ಯಾಲೋಚಿಸಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಜತೆಯಲ್ಲಿ ಸಿಬ್ಬಂದಿಗಳು ಕೂಡ ಪಡೆಯುತ್ತಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದರು.