ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಕೊಡಬೇಕೆಂದು ಒತ್ತಾಯಿಸಿ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದ ವಿದ್ಯಾರ್ಥಿ ನಾಯಕ ಶಾಂತಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸುಧೀರ್ಘವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಎಸ್. ಸುರೇಶ್ ಕುಮಾರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.